ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರಿಗೆ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು: ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಕೊರೊನಾ ತಗುಲಿ ಸಾವನ್ನಪ್ಪಿದ್ದಾರೆ. ಇದರಲ್ಲಿ 145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದಿದ್ದಾರೆ.

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಎಚ್.ಡಿ.ಕೆ. ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು