ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಸದಸ್ಯರಿಗೆ ರೂ.‌ 1 ಲಕ್ಷ ಪರಿಹಾರ : ಸಿಎಂ ಬಿ.ಎಸ್‌.ಯಡಿಯೂರಪ್ಪ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ರೂ.‌ 1 ಲಕ್ಷ ಪರಿಹಾರವನ್ನು ಸಿಎಂ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದರು.

ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಸುಮಾರು 20 ಸಾವಿರಕ್ಕೂ ಅಧಿಕ ಮಾತ್ರ ಕುಟುಂಬಗಳಿಗೆ ನೆರವು ದೊರೆಯಲಿದೆ. ಅದರಲ್ಲೂ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ₹250 ರಿಂದ ₹300 ಕೋಟಿ ಬೇಕಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.

ಸರ್ಕಾರದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದೆ, ಹೀಗಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ನೀಡಲು ಸಾಧ್ಯವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಕೋವಿಡ್‌ನಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ. ಹೀಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಕೋವಿಡ್ ನಿಂದ ಮೃತ ಕುಟುಂಬಕ್ಕೆ ನೆರವು ನೀಡುವ ಯೋಜನೆ ಕರ್ನಾಟಕ ಸರ್ಕಾರ ಘೋಷಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು