ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಬೇಕು: ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ.‌
ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು
ಈ ಅವಕಾಶವನ್ನು ಮುಖ್ಯಮಂತ್ರಿಗಳು ಬಳಸಿಕೊಳ್ಳಬೇಕು ಎಂದು ಅವರು ಅವರು ತಮ್ಮ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತರಾದ ಬಿಪಿಎಲ್ ಕುಟುಂಬಕ್ಕೆ ಸರ್ಕಾರ ಮತ್ತು 1ಲಕ್ಷ ರೂ. ಪರಿಹಾರ ನೀಡುವ ಮಹತ್ವದ ಯೋಜನೆಯನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಪರಿಹಾರ ಮೊತ್ತವನ್ನು ಐದು ಲಕ್ಷಕ್ಕೆ ಹೆಚ್ಚಿಸುವಂತೆ ಒತ್ತಾಯ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು