ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ: ನೇಮಕಾತಿ ಪತ್ರ ವಿತರಿಸಿದ ಸಚಿವ ಸುರೇಶಕುಮಾರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ಮನುಷ್ಯ ಕುಲವನ್ನು ಬೆಚ್ಚಿ ಬೀಳಿಸಿದೆ. ಬದುಕನ್ನು ತಲ್ಲಣಗೊಳಿಸಿರುವ ಕೋವಿಡ್ ಸೋಂಕು ಸೇರಿದಂತೆ ಹಲವು ಕಾರಣಗಳಿಂದ ಮೃತಪಟ್ಟ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರ ಅವಲಂಬಿತ ರಕ್ತ ಸಂಬಂಧಿಗಳಿಗೆ ಅನುಕಂಪದ ನೌಕರಿಯ ಆದೇಶಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವಿತರಿಸಿದರು.

ಗಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಶಿಕ್ಷಕರ 130 ಮಂದಿಯ ತಮ್ಮ ರಕ್ತ ಸಂಬಂಧಿಗಳಿಗೆ ಸಾಂಕೇತಿಕವಾಗಿ ಅನುಕಂಪದ ನೌಕರಿಯ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.

ಕೋವಿಡ್ ಸೋಂಕಿನಿಂದ ನಮ್ಮ ಶಿಕ್ಷಣ ಪರಿವಾರದ ಅನೇಕ ಮಂದಿ ಶಿಕ್ಷಕ ಬಂಧುಗಳು ನಮ್ಮನ್ನು ಅಗಲಿದ್ದು, ನಮ್ಮ ನಾಡಿಗೆ ಇದರಿಂದ ಅಪಾರ ನಷ್ಟವಾಗಿದೆ. ಮೃತ ಶಿಕ್ಷಕರ ಕುಟುಂಬಗಳಷ್ಟೇ ಅಲ್ಲ ನಮ್ಮ ನಾಡಿನ ಶಾಲಾ ಮಕ್ಕಳೂ ತಮ್ಮ ನೆಚ್ಚಿನ ಹಾಗೂ ಮೆಚ್ಚಿನ ಶಿಕ್ಷಕರನ್ನು ಕಳೆದುಕೊಂಡ ನೋವಿನಿಂದ ಇನ್ನೂ ಹೊರಬಂದಿಲ್ಲ. ಇಂತಹ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸುವ ಸಲುವಾಗಿ ಅನುಕಂಪದ ನೇಮಕಾತಿ ನೀಡಲು ಇಲಾಖೆ ಮುಂದಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದರು.

ನಿಷ್ಠೆಯಿಂದ ಶ್ರಮಿಸುವ ಕೈಗಳನ್ನು ಕಳೆದುಕೊಂಡು ನೋವಿನಲ್ಲಿ ಮುಳುಗಿರುವ ಕುಟುಂಬಗಳಿಗೆ ಈ ನೇಮಕಾತಿ ಆದೇಶಗಳು ಆಸರೆಯಾಗಲಿದ್ದು, ತನ್ನದೇ ಆದ ಪ್ರಾಮುಖ್ಯತೆ ಹೊಂದಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಮೃತ ಶಿಕ್ಷಕ ಬಂಧುಗಳ ಕುಟುಂಬಗಳ ನೆರವಿಗೆ ಮುಂದಾಗುವುದು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು