ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯ 45 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು: ಡಾ.ಸುಧಾಕರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಭಾರತ ಸರ್ಕಾರದ ನಿರ್ದೇಶನದಂತೆ ಕೊರೊನಾ ಲಸಿಕೆಯನ್ನು ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯ ಶೇ. 70 ರಷ್ಟು 2 ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಸುಧಾಕರ್ ಅವರು, ರಾಜ್ಯದಲ್ಲಿ ಈಗ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70% ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಹಾಗೂ ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು. ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು