ಹುಬ್ಬಳ್ಳಿ (24-10-2020): ಕಾನೂನು ಕಾಲೇಜು ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಎಂಬವರನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಪ್ರೊಫೆಸರ್ ನಿವಾಸದಲ್ಲಿ ಅವರನ್ನು ಇರಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅವರ ಅಳಿಯನ ಮೇಲೆ ಶಂಸಯ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಗದಗದ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದ ಶಂಕ್ರಪ್ಪ ಇತ್ತೀಚೆಗೆ ನಿವೃತ್ತಿಗೊಂಡು ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.