ಬೆಂಗಳೂರು(04-10-20: ಸಿ.ಟಿ. ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ ಅವರು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಮಾತ್ರ ರಾಜೀನಾಮೆಯನ್ನು ಅಂಗೀಕರಿಸಿಲ್ಲ .
ಸಿಟಿ ರವಿಯವರ ರಾಜೀನಾಮೆಯನ್ನು ಅಂಗೀಕರಿಸದ ಸಿಎಂ ಬಿ.ಎಸ್. ಯಡಿಯೂರಪ್ಪ ದಸರಾ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಮುಗಿಯುವ ತನಕ ಮುಂದುವರಿಯುವಂತೆ ಸೂಚನೆ ನೀಡಿದ್ದಾರೆ.
ಅಕ್ಟೋಬರ್ 5 ಹಾಗೂ 6ರಂದು ದೆಹಲಿಯಲ್ಲಿ ಬಿಜೆಪಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಪಕ್ಷದ ಆಯಕಟ್ಟಿನ ಹುದ್ದೆಗೆ ಆಯ್ಕೆಗೊಂಡ ರಾಜ್ಯದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ರಾಜೀನಾಮೆ ಬಗ್ಗೆ ವರಿಷ್ಠರು ಅಲ್ಲಿಯೇ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ.