ಕೇರಳ(04-12-2020): ಬ್ಯುರೆವಿ ಚಂಡಮಾರುತದ ಪ್ರಭಾವದ ಭಾರೀ ಮಳೆಯಿಂದಾಗಿ ಕೇರಳ ಸರ್ಕಾರ ಶುಕ್ರವಾರ ಐದು ಜಿಲ್ಲೆಗಳಲ್ಲಿ ರಜಾದಿನವನ್ನು ಘೋಷಿಸಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ತನ್ನ ಇತ್ತೀಚಿನ ಬುಲೆಟಿನ್ ನಲ್ಲಿ ಬುರೆವಿ ಡಿಸೆಂಬರ್ 4 ರಂದು ಕೇರಳದಲ್ಲಿ ಹವಾಂತರವನ್ನು ಸೃಷ್ಟಿಸಲಿದೆ ಎಂದು ಹೇಳಿದ್ದು, ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ತೀರಗಳಿಗೆ ರೆಡ್ ಅಲರ್ಟ್ ಮತ್ತು ಚಂಡಮಾರುತದ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ತಿರುವನಂತಪುರಂ, ಕೊಲ್ಲಂ, ಪಥನತ್ತಿಟ್ಟಂ, ಆಲಪ್ಪುಝ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಸಾರ್ವಜನಿಕ ರಜಾದಿನವನ್ನು ಘೋಷಿಸಲಾಗಿದೆ. ಕೇರಳದಲ್ಲಿ 2 ಸಾವಿರಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ.
ರಾಜ್ಯದ ಐದು ಜಿಲ್ಲೆಗಳ ಸಾರ್ವಜನಿಕ ವಲಯದ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರಜಾದಿನವನ್ನು ಘೋಷಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಂಬಂಧಿತ ಸೇವೆಗಳು, ತುರ್ತು ಸೇವೆಗಳು ಮತ್ತು ಚುನಾವಣೆಗೆ ಸಂಬಂಧಿಸಿದ ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರಕಟಣೆ ಹೇಳಿದೆ. ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿಸೆಂಬರ್ 4 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.