ಬಂಟ್ವಾಳ(23-11-2020); ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಪ್ರದೇಶಕ್ಕೆ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಚಂಡಮಾರುತ ತೀವ್ರವಾಗಲಿದೆ ಮತ್ತು ನವೆಂಬರ್ 25 ರ ಮಧ್ಯಾಹ್ನ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.100ಕಿ. ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ನವೆಂಬರ್ 25 ರಿಂದ ತಮಿಳುನಾಡಿನ ಕೆಲವು ಭಾಗಗಳಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಪುದುಚೇರಿಗೆ ಸೈಕ್ಲೋನ್ ಎಚ್ಚರಿಕೆ ನೀಡಲಾಗಿದ್ದು, ನವೆಂಬರ್ 25 ರವರೆಗೆ ನೈಋತ್ಯ ಕೊಲ್ಲಿ ಮತ್ತು ತಮಿಳುನಾಡಿನ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.