ದಸರಾ ಮುಗಿದ ತಕ್ಷಣ ಒಂದನೇ ತರಗತಿಯಿಂದ ಶಾಲೆ ಆರಂಭಿಸಲಾಗುವುದು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಡುಪಿ : ದಸರಾ ಹಬ್ಬ ಮುಗಿದ ತಕ್ಷಣವೇ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಆರಂಭಿಸಲಾಗುವುದು ಮತ್ತು ಮಧ್ಯಾಹ್ನದ ಬಿಸಿಯೂಟವೂ ಪ್ರಾರಂಭಿಸಲಾಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಹಲವು ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೂನ್ಯವಿದೆ. ಈಗಾಗಲೇ ಆರಂಭಿಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ತರಗತಿಗಳು ನಿರೀಕ್ಷೆಯಂತೆ ನಡೆಯುತ್ತಿವೆ.

ಪ್ರಾಥಮಿಕ ಶಾಲೆಯೂ ಆರಂಭಿಸಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಶಾಲೆಗಳ ಆರಂಭಕ್ಕೆ ಆಸಕ್ತಿ ತೋರಿದ್ದಾರೆ. ಹಾಗಾಗಿ ದಸರಾ ಮುಗಿದ ತಕ್ಷಣ ಶಾಲೆಗಳು ಆರಂಭ ಮಾಡುತ್ತೇವೆ. ಇದರ ಜೊತೆಗೆ ಬಿಸಿಯೂಟವೂ ಆರಂಭವಾಗುತ್ತೆ, ಈಗಾಗಲೇ ಎಲ್ಲ ಜಿಲ್ಲೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಆದರೆ ಮೊದಲಿನಂತೆ ಶಾಲೆಗಳಲ್ಲಿ ಕಡ್ಡಾಯ ಹಾಜರಾತಿ ಇರುವುದಿಲ್ಲ. ಮುಂದೆಯೂ ಇರುವುದಿಲ್ಲ. ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡು ಮಾದರಿಯಲ್ಲಿ ಕ್ಲಾಸ್‌ಗಳು ನಡೆಯುತ್ತವೆ.ಗ್ರಾಮೀಣ ಭಾಗದ ಮಕ್ಕಳಿಗೆ ಆನ್ ಲೈನ್ ತರಗತಿಗೆ ಸಾಧ್ಯವಾಗುತ್ತಿಲ್ಲ. ಇಚ್ಛೆಯಿದ್ದವರು ಆಫ್ ಲೈನ್ ತರಗತಿಗಳಿಗೆ ಹಾಜರಾಗಬಹುದು ಎಂದರು. ಇನ್ನು ಇದೇ ವೇಳೆ ಸಧ್ಯ ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್‌ ಹಾಜರಾತಿ ಶೇ.90ರಷ್ಟಿದೆ ಎಂದು ಶಿಕ್ಷಣ ಸಚಿವರು ಅಭಿಪ್ರಾಯಪಟ್ಟರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು