ದಾವಣಗೆರೆ(10-12-2020): ಧೂಡಾದ ಅಧೀನದಲ್ಲಿ ಕಾಮಗಾರಿಯೇ ನಡೆಯದೆ 1.25 ಕೋಟಿ ರೂ. ಪಾವತಿಯಾಗಿದೆ ಎಂದು ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಆರೋಪಿಸಿದ್ದಾರೆ.
ಮಾದ್ಯಮಗಳ ಜೊತೆ ಮಾತನಾಡಿದ ರಾಜನಹಳ್ಳಿ ಶಿವಕುಮಾರ್, ಸರ್ ಮಿರ್ಜಾ ಇಸ್ಮಾಯಿಲ್ ನಗರದಲ್ಲಿ ಹಾದು ಹೋಗಿರುವ ರಸ್ತೆಯಲ್ಲಿ ಅನಧಿಕೃತವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿರುವವರಿಗೆ ಪುನರ್ವಸತಿ ಕಲ್ಪಿಸಲು ನಿರ್ಮಿತಿ ಕೇಂದ್ರಕ್ಕೆ 1.25 ಕೋಟಿ ರೂ. ಬಿಡುಗಡೆಯಾಗಿತ್ತು.
ಆದರೆ ಕಾಮಗಾರಿಯಾಗಿರುವುದು ಕಂಡುಬಂದಿಲ್ಲ. ಈ ಬಗ್ಗೆ ವರದಿ ನೀಡುವಂತೆ ನಿರ್ಮಿತಿ ಕೇಂದ್ರಕ್ಕೆ ಪ್ರಾಧಿಕಾರ ಸೂಚನೆ ನೀಡಿದರೂ ಯಾವುದೇ ಮಾಹಿತಿ ನೀಡಿಲ್ಲ. ಆ ಪ್ರದೇಶದಲ್ಲಿ ಹೋಗಿ ನೋಡಿದರೆ ಅನಧಿಕೃತ ಗುಡಿಸಲುಗಳು ಕಂಡು ಬಂದಿದೆ ಎಂದು ಹೇಳಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಕಾಮಗಾರಿಯೇ ನಡೆಸದೆ ಹಣ ಪಾವತಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಇಲಾಖೆ ತನಿಖೆ ಸಹಿತ ಎಲ್ಲ ರೀತಿಯ ತನಿಖೆಗೆ ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ.