ಕಣ್ಣೀರು ಹಾಕಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

dcm
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(17-10-2020): ಪ್ರವಾಹ ಪೀಡಿತ ಜಿಲ್ಲೆಗೆ ಭೇಟಿ ನೀಡದೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಡಿಸಿಎಂ ಗೋವಿಂದ ಕಾರಜೋಳ ನನಗೆ ವಯಸ್ಸಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.

ಶಿರಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾರಜೋಳ, ನಾನು ಅಸಹಾಯಕನಾಗಿ ಶಿರಾಗೆ ಹೋಗಿ ಬಂದಿದ್ದೇನೆ. ಒಂದು ವಿಚಾರವನ್ನು ಇಟ್ಟುಕೊಂಡು ವ್ಯಕ್ತಿಯನ್ನು ಅಳೆಯಬೇಡಿ ಎಂದು ಹೇಳಿದ್ದಾರೆ.

ನನಗೆ ವಯಸ್ಸಾಗಿದೆ. ಕೊರೊನಾದಿಂದಾಗಿ 600-700 ಕಿ.ಮೀ. ದೂರ ಪ್ರಯಾಣ ಮಾಡಲು ನನಗೆ ಶಕ್ತಿಯಿಲ್ಲ. ನಾವು ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲಿದ್ದೇವೆ. ನನಗೆ 70 ವರ್ಷ ವಯಸ್ಸಾಗಿದೆ. ನಾನು ಇಷ್ಟು ವರ್ಷ ಚೆನ್ನಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು