ಬೆಡ್ ಸಿಗದೆ ಕೋವಿಡ್ ಸೋಂಕಿತ ವೈದ್ಯ ಸಾವು, ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ವೈದ್ಯನಿಗೆ ಸಿಕ್ಕಿಲ್ಲ ಚಿಕಿತ್ಸೆ!

death
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(10-10-2020): ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದ ಡಾಕ್ಟರ್ ಓರ್ವರು ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್ ಸಿಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿ.ಬಸವರಾಜ್ ಮೃತ ವೈದ್ಯ. ಇವರು ಕಳೆದ 10 ವರ್ಷಗಳಿಂದ ರಾಜಾಜಿನಗರದಲ್ಲಿನ ಇಎಸ್‌ಐ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ ತಮ್ಮದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದರು. ಆದರೆ ಬೆಡ್ ಖಾಲಿ ಇಲ್ಲದ ಕಾರಣ ಇವರನ್ನು ಆಸ್ಪತ್ರೆಗೆ ದಾಖಲಿಸಿಲ್ಲ.

ಮತ್ತೆ ಎರಡು ಆಸ್ಪತ್ರೆಗಳಿಗೆ ಸುತ್ತಿದ್ದಾರೆ. ಕೊನೆಗೆ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ವೇಳೆಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಅವರು ಮೃತಪಟ್ಟಿದ್ದರು.

 

 

 

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು