ಹತ್ರಾಸ್ ಬೆನ್ನಲ್ಲೇ ಮತ್ತೋರ್ವ ದಲಿತ ಮಹಿಳೆಯ ಅತ್ಯಾಚಾರ, ನೇಣು ಬಿಗಿದ ಸ್ಥಿತಿಯಲ್ಲಿ ಸಂತ್ರಸ್ಥೆಯ ಮೃತದೇಹ ಪತ್ತೆ!

rape
Share on facebook
Share on twitter
Share on linkedin
Share on whatsapp
Share on telegram
Share on email
Share on print

ಭೋಪಾಲ್‌ (03-10-2020): ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶದಲ್ಲಿ ಆಕ್ರೋಶದ ಅಲೆಯನ್ನು ಉಂಟು ಮಾಡಿರುವ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೋರ್ವ ದಲಿತ ಮಹಿಳೆ ಮೇಲೆ  ಸಾಮೂಹಿಕ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಸಂತ್ರಸ್ತ ದಲಿತ ಮಹಿಳೆ ಸೆಪ್ಟೆಂಬರ್‌ 28ರಂದು ಸ್ಥಳೀಯ ಪೋಲಿಸ್‌ ಠಾಣೆಗೆ ಆಗಮಿಸಿ ನನ್ನ ಮೇಲೆ ಮೂವರು ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಆದರೆ ಸ್ಥಳೀಯ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಘಟನೆಯಿಂದ ನೊಂದಿದ್ದ ಸಂತ್ರಸ್ತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು