ಡೆಹ್ರಾಡೂನ್: ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಅಚಾನಕ್ ಆಗಿ ಸಿ4 ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಉತ್ತರಾಖಂಡದ ಕಾನ್ಸ್ರೋ ಬಳಿ ಈ ಘಟನೆ ನಡೆದಿದೆ.
“ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ.ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ” ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಮಾಧ್ಯಮವರಿಗೆ ತಿಳಿಸಿದರು.