ದೆಹಲಿಯಲ್ಲಿ ಕೊರೊನಾ ಇಳಿಮುಖ: ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭ – ಸಿಎಂ ಕೇಜ್ರಿವಾಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೆಹಲಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ಗಣನೀಯವಾಗಿ ತಗ್ಗಿರುವ ಹಿನ್ನಲೆಯಲ್ಲಿ ಇದೇ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕೇಜ್ರಿವಾಲ್ ಅವರು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 1100 ಸೋಂಕು ಪ್ರಕರಣಗಳು ಮಾತ್ರ ವರದಿಯಾಗಿದ್ದು, ಆ ಮೂಲಕ ದೆಹಲಿಯ ಸೋಂಕು ದರ ಶೇ.1.5ಕ್ಕೆ ಇಳಿಕೆಯಾಗಿದೆ. ಹೀಗಾಗಿ ಹಾಲಿ ಲಾಕ್ ಡೌನ್ ಸೋಮವಾರಕ್ಕೆ ಅಂತ್ಯವಾಗಲಿದ್ದು, ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಸೋಮವಾರ ಬೆಳಗ್ಗೆ 5 ಗಂಟೆಗೆ ಲಾಕ್ ಡೌನ್ ಅಂತ್ಯವಾಗಲಿದೆ ಎಂದಿದ್ದಾರೆ.

ದಿನಗೂಲಿ ಕಾರ್ಮಿಕ ರನ್ನು ಗಮನದಲ್ಲಿರಿಸಿಕೊಂಡು ಕೇಜ್ರಿವಾಲ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಿದ ಜನರನ್ನು ಹಸಿವಿನಿಂದ ಸಾಯಲು ಬಿಡುವುದಿಲ್ಲ. ಹೀಗಾಗಿ ಕಟ್ಟಡ ನಿರ್ಮಾಣ, ಕಾರ್ಖಾನೆಗಳು ಸೋಮವಾರ ದಿಂದ ಆರಂಭಿಸಬಹುದು ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

ಕೊರೊನಾ ವಿರುದ್ಧ ದೆಹಲಿ ಜನತೆ ನಡೆಸಿದ ಹೋರಾಟದ ಫಲವಾಗಿ ಇಂದು ಕೊರೊನಾ ಕೇಸ್ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಈಗಿರುವ ಲಾಕ್ ಡೌನ್ ದಿಂದ ನಾವು ನಿಧಾನವಾಗಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸುತ್ತೇವೆ. ಇದು ದೆಹಲಿ ಜನತೆಯ ಶ್ರಮದ ಫಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು