ದೆಹಲಿಯಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ : ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೆಹಲಿಯ ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತವಾಗಿ ನೀಡಲಾಗುವುದು. 5 ಕೆಜಿ ಕೇಂದ್ರ ಹಾಗೂ 5 ಕೆಜಿ ಅಕ್ಕಿ ದೆಹಲಿ ಸರ್ಕಾರದ ವತಿಯಿಂದ ರೇಷನ್ ಕಾರ್ಡ್ ಇಲ್ಲದವರಿಗೂ 10 ಕೆಜಿ ಉಚಿತವಾಗಿ ಅಕ್ಕಿ ವಿತರಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಕೋವಿಡ್ ಎರಡನೇ ಅಲೆಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ ಜನತೆಗೆ ಜೀವನ ನಿರ್ವಹಣೆಗೆ ತೊಂದರೆ ಆಗುತ್ತಿದೆ, ಮನೆಯವರನ್ನು ಕಳೆದುಕೊಂಡಿರುವ ಕುಟುಂಬದವರು ತೀರ ಸಂಕಷ್ಟಕ್ಕೆ ಸಿಲುಕುತ್ತಾರೆ. ಅವರಿಗೆ ನಮ್ಮ ಸರ್ಕಾರದ ವತಿಯಿಂದ ನೆರವು ನೀಡುವ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ದೆಹಲಿ ಜನತೆಗೆ ಕೊರೊನಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇನೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ‌ಹೇಳಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 50,000 ರೂ. ಪರಿಹಾರ ನೀಡಲಾಗುವುದು. ಹಾಗೂ ಮೃತರ ಕುಟುಂಬದ ಸದಸ್ಯರಿಗೆ ಮೃತರ ಹೆಸರಿನಲ್ಲಿ ಪ್ರತಿ ತಿಂಗಳು 10 ಸಾವಿರ ಪಿಂಚಣಿ ನೀಡಲಾಗುವುದು ಎಂದಿದ್ದಾರೆ. ಮೃತರ ಕುಟುಂಬದ ಮಕ್ಕಳಿಗೆ ತಿಂಗಳಿಗೆ 2500 ರೂಪಾಯಿ ಪಿಂಚಣಿ ನೀಡಲಾಗುವುದು ಹಾಗೂ ತಂದೆ, ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ 25 ವರ್ಷದವರೆಗೆ ಪಿಂಚಣಿ ಸೌಲಭ್ಯ ನೀಡಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು