ಕೋಲ್ಕತ(12-11-2020): ಅಂಗಾಗ ಮುರಿಯುತ್ತೇವೆ, ಕೊಲೆಯು ನಡೆಯಬಹುದು, ಸ್ಮಶಾನಕ್ಕೆ ಕಳುಹಿಸುತ್ತೇವೆ ಎಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಬೆದರಿಕೆ ಹಾಕಿದ್ದ ಬಿಜೆಪಿ ಪಶ್ಚಿಮ ಬಂಗಾಳದ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಕೆಲ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ವರದಿಯಾಗಿದೆ.
ದಿಲೀಪ್ ಘೋಷ್ ಮೇಲೆ ಮತ್ತು ಅಲಿಪುರ್ದಾರ್ ಜಿಲ್ಲೆಯಲ್ಲಿ ಕಾಲ್ಚಿನಿ ಕ್ಷೇತ್ರದ ಶಾಸಕ ವಿಲ್ಸನ್ ಚಂಪಪುರಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೂ ದಾಳಿ ನಡೆಸಲಾಗಿದೆ. ಇದರಿಂದಾಗಿ ವಾಹನಕ್ಕೆ ಹಾನಿಯಾಗಿದೆ ಎಂದು ಹೇಳಲಾಗಿದೆ.
ದಿಲೀಪ್ ಘೋಷ್ ಹೇಳಿಕೆ ಸಾಮಾನ್ಯವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಿತ್ತು. ಇದೀಗ ಅವರ ಮೇಲೆಯೇ ಹಲ್ಲೆ ನಡೆದಿದೆ. ಹಲ್ಲೆ ಬಗ್ಗೆ ಬಿಜೆಪಿ ಟಿಎಂಸಿ ಕಾರ್ಯಕರ್ತರನ್ನು ದೂರಿದೆ.
ಪ.ಬಂಗಾಳದಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿವಿಧ ರೀತಿಯ ಕಸರತ್ತನ್ನು ಪಶ್ಚಿಮ ಬಂಗಾಳದಲ್ಲಿ ನಡೆಸುತ್ತಿದೆ. ಇನ್ನೊಂದೆಡೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದಾರೆ.