ರಾಂಚಿ(26-10-2020): ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
ಜಾರ್ಖಂಡ್ ಸಿಬಿಐ ವಿಶೇಷ ನ್ಯಾಯಾಲಯವು ಇತ್ತೀಚೆಗಷ್ಟೇ ಪ್ರಕರಣದಲ್ಲಿ ದಿಲೀಫ್ ರೇ ದೋಷಿ ಎಂದು ತೀರ್ಪು ನೀಡಿತ್ತು.
ಇವರ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಪ್ಯಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ದಿಲೀಪ್ ರೇ , ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು.