ಕಲ್ಲಿದ್ದಲು ಹಗರಣ; ಮಾಜಿ ಸಚಿವ ದಿಲೀಪ್ ರೇ ದೋಷಿ ಎಂದ ಕೋರ್ಟ್!

dileep
Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಂಚಿ(06-10-2020): ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಇಂದು ಘೋಷಿಸಿದೆ.

ದಿಲೀಪ್​ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ, ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್​ವಾಲ್​ ಅವರೂ ದೋಷಿ​​ಗಳೆಂದು ಕೋರ್ಟ್ ತೀರ್ಪು ನೀಡಿದೆ. ಅ.14ರಂದು ಅವರಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

1999ರ ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು