ಹೊಸದೆಹಲಿ(11/10/2020): ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ರೋಡ್ ಟ್ಯಾಕ್ಸ್ ನಿಂದ ಕೇಜ್ರಿವಾಲ್ ಸರಕಾರ ವಿನಾಯಿತಿ ಘೋಷಿಸಿದೆ. ಟ್ವೀಟ್ ಮೂಲಕ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಇಂದು ಈ ವಿಷಯ ತಿಳಿಸಿದ್ದಾರೆ.
ಈಗಾಗಲೇ ನಮ್ಮ ಸರಕಾರ ನಿನ್ನೆ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
` ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ದೆಹಲಿ ಸರ್ಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದೆ. ದೆಹಲಿಯ ಜನ ಶೀಘ್ರವೇ ಇತರ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತನೆಗೊಳ್ಳಲಿದ್ದಾರೆ’ ಎಂದಿದ್ದಾರೆ.