ದೇಶದ 80 ಕೋಟಿ ಜನರಿಗೆ 2 ತಿಂಗಳು ಉಚಿತ ರೇಷನ್ : ಪ್ರಧಾನಿ ಮೋದಿ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ : ದೇಶದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೆಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್, ವಾರಾಂತ್ಯ ಕರ್ಫ್ಯೂ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಬಡವರ ಕೂಲಿಕಾರರ ಬದುಕು ಮತ್ತೆ ಕಂಗಾಲಾಗುವ ಮುನ್ಸೂಚನೆ ಇದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರಿಗೆ ಕೇಂದ್ರ ಸರ್ಕಾರವು ಮುಂದಿನ ಎರಡು ತಿಂಗಳು (ಮೇ ಮತ್ತು ಜೂನ್) ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯವನ್ನು ಒದಗಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದರು.

ಇದನ್ನು “ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ” ಅಡಿಯಲ್ಲಿ ಅನುಕೂಲ ಮಾಡಿಕೊಡಲಾಗುವುದು. ಯೋಜನೆಯ ಪ್ರಕಾರ, ಕೇಂದ್ರವು 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯವನ್ನು ಒದಗಿಸಲಿದೆ. ಇದಕ್ಕಾಗಿ ೨೬,೦೦೦ ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ (ಎಪ್ರಿಲ್ – ಜೂನ್) ಮೂರು ತಿಂಗಳು ಇದೇ ಯೋಜನೆ ಅಡಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಿತ್ತು. ಈಗ ದೇಶವು ಕೋವಿಡ್-19 ರ ಎರಡನೇ ಅಲೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಬಡವರು ಕೆಲಸ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಬಡವರಿಗೆ ಪೌಷ್ಠಿಕಾಂಶ ನೀಡುವುದು ಮುಖ್ಯ, ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು