ದೇಶದಲ್ಲಿ ಮತ್ತೊಮ್ಮೆ ‘ಲಾಕ್ ಡೌನ್’ ಹೇರುವ ಮುನ್ನ ಬಡಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ರಾಹುಲ್ ಗಾಂಧಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಕೊರೋನಾ ವೈರಸ್ ನಿರ್ವಹಣೆಯಲ್ಲಿ ಕೇಂದ್ರದ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೊರೊನಾ ವೈರಸ್ ತಡೆಗಟ್ಟಲು ಯಾವುದೇ ಕಾರ್ಯ ಯೋಜನೆ ಇಲ್ಲ. ಇದರಿಂದ ದೇಶದಲ್ಲಿ ಮತ್ತೊಂದು ಲಾಕ್ಡೌನ್ ಎದುರಿಸುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ,
ಕಳೆದ ವರ್ಷ ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಳ್ಳುತ್ತಿರುವಾಗ ಯಾರಿಗೂ ಮುನ್ಸೂಚನೆ ಇಲ್ಲದೆ ಲಾಕ್ ಡೌನ್ ವಿಧಿಸಿದರು. ಇದರಿಂದ ದೇಶದ ಜನತೆ ತತ್ತರಿಸಿ ಹೋಗಿ ಜೀವನ ನಿರ್ವಹಣೆಗೂ ಪರದಾಡುವಂತಾಗಿತ್ತು. ಈಗ ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದ ಪ್ರತಿದಿನ ಲಕ್ಷಾಂತರ ಪ್ರಕರಣಗಳು ಪತ್ತೆ ಆಗುತ್ತಿವೆ. ಈಗ ದೇಶದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ನತ್ತ ಸಾಗುವಂತಾಗಿದೆ’ ಎಂದು ಟೀಕಿಸಿದ್ದಾರೆ.

ದೇಶದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸುವುದನ್ನು ನಾನು ವಿರೋಧಿಸುತ್ತೇನೆ. ಅಸಮರ್ಪಕ ಲಾಕ್ ಡೌನ್ ದಿಂದ ಬಡ ಕೂಲಿಕಾರರಿಗೆ ತುಂಬಾ.ತೊಂದರೆ ಆಗುತ್ತದೆ, ಹೀಗಾಗಿ ಬಡ ಜನರಿಗಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಿ ನೆರವು ಒದಗಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು