ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವಿಟ್ಟರ್ ನಲ್ಲಿ ಪ್ರಕಟಿಸಿದೆ.

ಭಾರತವು ಗುರುವಾರ ತನಕ 100 ಕೋಟಿ ಕೋವಿಡ್‌-19 ಲಸಿಕೆ ಡೋಸ್‌ಗಳ ವಿತರಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಅದರ ಬೆನ್ನಲ್ಲೇ ಇಂದು ಪ್ರಧಾನಿ ಮೋದಿ ಅವರ ಭಾಷಣ ನಿಗದಿಯಾಗಿದೆ. ನಿನ್ನೆ ಪ್ರಧಾನಿ ರಾಮ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಜಗತ್ತಿನ ಆರ್ಥಿಕತೆಯು ಮುಗ್ಗರಿಸುವಂತೆ ಮಾಡಿದ ಕೋವಿಡ್‌ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಆರೋಗ್ಯ ಕಾರ್ಯಕರ್ತರ ಪಾತ್ರದ ಕುರಿತು ಪ್ರಧಾನಿಗಳು ಬಣ್ಣಿಸಿದರು.

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್‌-19 ದೃಢ ಪ್ರಕರಣಗಳ ಸಂಖ್ಯೆ ಕಡಿಮೆ ದಾಖಲಾಗುತ್ತಿದೆ. ಇದರಿಂದ ಕೋವಿಡ್ ನಿಂದ ತತ್ತರಿಸಿದ ದೇಶ ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ಕೋವಿಡ್ ಹಿಮ್ಮೆಟ್ಟಿಸಲು ಆರಂಭಿಸಿದ ಲಸಿಕಾ ಅಭಿಯಾನ ಅಭೂತಪೂರ್ವ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದೇಶದಲ್ಲಿ ನೂರು ಕೋಟಿ ಲಸಿಕೆ ಡೋಸ್‌ಗಳನ್ನು ಪೂರ್ಣಗೊಳಿಸಿದೆ, ಚೀನಾ ಬಿಟ್ಟರೆ ಜಗತ್ತಿನಲ್ಲಿ ಶತಕೋಟಿ ಲಸಿಕೆ ಡೋಸ್ ಗಳನ್ನು ವಿತರಣೆ ಮಾಡಿದ ದೇಶ ಭಾರತ ಎನ್ನುವುದು ಹೆಮ್ಮೆಯಿದೆ, ಇದಕ್ಕೆ ಆರೋಗ್ಯ ಸಿಬ್ಬಂದಿ ಹಾಗೂ ಸಹಕರಿಸಿದ ದೇಶದ ಜನತೆಗೆ ಅಭಿನಂದನೆಗಳು ಸಲ್ಲಿಸಿದ್ದಾರೆ.

 

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಈಗಾಗಲೇ ಯಶಸ್ವಿಯಾದ ದೇಶದ ಜನತೆಗೆ ಧನ್ಯವಾದಗಳು ಹೇಳುವ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಏನಾದರೂ ಹೊಸ ಘೋಷಣೆ ಏನು ಮಾಡಬಹುದು ಎನ್ನುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು