ಮಸೀದಿಗಳ ಧ್ವನಿವರ್ಧಕ ನಿಷೇಧ; ಡಿಜಿಪಿ ಪತ್ರ ವೈರಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(05/11/2020): ಮಸೀದಿಗಳಲ್ಲಿನ ಧ್ವನಿವರ್ಧಕ ತೆರವುಗೊಳಿಸುವಂತೆ ಆದೇಶಿಸಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಪತ್ರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ವಕೀಲರಾದ ಹರ್ಷ ಮುತಾಲಿಕ್ ಎಂಬವರು ರಾಜ್ಯದೆಲ್ಲೆಡೆ ಇರುವ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳ ನಿಷೇಧಿಸಿ ತೆರವುಗೊಳಿಸುವಂತೆ ಒತ್ತಾಯಿಸಿ ಡಿಜಿಪಿಗೆ ಪತ್ರ ಬರೆದಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿರುವ ಪೊಲೀಸ್ ಮಹಾ ನಿರ್ದೇಶಕರು ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ಯಾವುದೇ ರೀತಿಯ ಅಧಿಕೃತ ಆದೇಶ ಬಂದಿಲ್ಲ. ಇಲಾಖೆ ಈ ಬಗ್ಗೆ ಕ್ರಮಕ್ಕೆ ಕೈಗೊಳ್ಳುತ್ತಿಲ್ಲ. ಇಲಾಖೆಯಲ್ಲಿನ ಕಾನೂನು ವಿಭಾಗದ ಅಭಿಪ್ರಾಯ ಪಡೆದ ಬಳಿಕವಷ್ಟೇ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು