ಡಿ.ಜೆ-ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(04/11/2020): ಡಿ.ಜೆ-ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಪ್ರಕರಣದ ತನಿಖೆಗೆ  ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾಜಿ ಮೇಯರ್ ಸಂಪತ್‍ರಾಜ್‍ಗೆ ಭಾರೀ ಹಿನ್ನಡೆಯಾಗಿದೆ.

ಸಂಪತ್‍ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ಸಿಸಿಬಿ ಪರ ವಾದಿಸಿದ ಎಸ್‍ಪಿಪಿ ಪ್ರಸನ್ನಕುಮಾರ್ ಅವರು, ಮಾಜಿ ಮೇಯರ್ ಸಂಪತ್‍ರಾಜ್ ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಕೊರೋನ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸುಳ್ಳು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದೂವರೆ ತಿಂಗಳು ಕಳೆದರೂ ಗುಣಮುಖ ಆಗಿರುವ ಬಗ್ಗೆ ಮಾಹಿತಿ ನೀಡಿರಲಿಲ್ಲ. ಅಲ್ಲದೆ, ಕೊರೋನ ಮತ್ತೆ ಬಂದಿದೆ ಎಂದೂ ನೆಪ ಹೇಳಿದ್ದರು ಎಂದು ಪೀಠಕ್ಕೆ ತಿಳಿಸಿದರು.

ಇತ್ತೀಚಿಗೆ ಪೊಲೀಸರಿಗೂ ಮಾಹಿತಿ ನೀಡದೆ, ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಆಸ್ಪತ್ರೆಯವರೂ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಈಗ ಸಂಪತ್‍ರಾಜ್ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಪ್ರಕರಣಕ್ಕೆ ತಡೆ ನೀಡದಂತೆ ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು