ಬೆಳಗಾವಿ (03-10-2020): ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಡಿ.ಕೆ ರವಿ ಪತ್ನಿ ಕುಸುಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತೆ ಎನ್ನುವಂತಹ ಸುದ್ದಿ ವ್ಯಾಪಕವಾಗಿ ಹರಿದಾಡಿದ್ದವು. ಈ ಬಗ್ಗೆ ಕೆ.ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆಯ ಕುರಿತು ನಾನು ತೀರ್ಮಾನ ಮಾಡುವುದಿಲ್ಲ. ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಅವರೇ ಎಲ್ಲರ ಜೊತೆ ಸಭೆ ಮಾಡಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡುತ್ತಾರೆ.ಬಳಿಕ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಬಾಲಕೃಷ್ಣ, ಎಂ.ಶ್ರೀನಿವಾಸ ಬಾಬು, ಡಿಸಿಸಿ ಅಧ್ಯಕ್ಷರು ಸೇರಿ ಹಲವರು ಪಕ್ಷದಲ್ಲೇ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಅರ್ಜಿ ಬಂದ ಮೇಲೆ ಪರಿಶೀಲಿಸಿ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಆ ಬಳಿಕ ದೆಹಲಿಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡುವುದಾಗಿ ಹೇಳಿದ್ದಾರೆ.