ಬಿಹಾರ ಚುನಾವಣಾ ಫಲಿತಾಂಶದಲ್ಲಿ ಸಂಶಯವಿದೆ; ಸಂಸದ ಡಿ.ಕೆ.ಸುರೇಶ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(13/11/2020): ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಅಲ್ಲಿ ಇವಿಎಂ ಮೇಲೆ ದುರ್ಬಳಕೆ ಆರೋಪ ಕೇಳಿಬರುತ್ತಿದ್ದು, ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಸುವುದೇ ಸೂಕ್ತ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮೆರಿಕಾದಲ್ಲಿ ಈಗಲೂ ಅಧ್ಯಕ್ಷೀಯ ಚುನಾವಣೆಗೆ ಬ್ಯಾಲೆಟ್ ಪೇಪರ್ ಅನ್ನೇ ಬಳಸುತ್ತಾರೆ. ಆದರೆ, ನಮ್ಮಲ್ಲಿ ಮಾತ್ರ ಇವಿಎಂ  ಬಳಸಲಾಗುತ್ತದೆ. ಮನುಷ್ಯರು ತಯಾರಿಸಿದ ಯಂತ್ರವನ್ನು ದುರ್ಬಳಕೆ ಮಾಡುವುದು ಅಸಾಧ್ಯವೇನಲ್ಲ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.

ಮನುಷ್ಯರೇ ಮಾಡಿರುವುದರಿಂದ ಅದನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶವಿದೆ. ಆದ್ದರಿಂದ ಇವಿಎಂ ಬದಲಿಗೆ ಅಮೆರಿಕದಂತೆ ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕು. ಅದಕ್ಕಾಗಿ ವಿವಿಧ ಪಕ್ಷಗಳು ಸೇರಿ ಅಭಿಯಾನ ಮಾಡಬೇಕು. ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಬೇಕು ಎಂದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು