ಬೆಂಗಳೂರು(04-10-2020): ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಂಸದ ಡಿ ಕೆ ಸುರೇಶ್ ಉಪಸ್ಥಿತಿಯಲ್ಲಿ ಕುಸುಮಾ ರವಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಆರ್. ಆರ್. ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕುಸುಮಾ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಡಿಕೆ ರವಿ ತಾಯಿ, ಕುಸುಮಾ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಅವರು ಚುನಾವಣೆಯಲ್ಲಿ ನನ್ನ ಮತ್ತು ನನ್ನ ಮಗನ ಹೆಸರು ಹೇಳಿ ಮತ ಕೇಳಬಾರದು. ಕೇಳಿದರೆ ಸುಮ್ಮನಿರುವುದಿಲ್ಲ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.