ಪ್ರಚಾರಕ್ಕಾಗಿ ಬಿಜೆಪಿ ಮುಖಂಡರು ನನ್ನ ಹಾಗೂ ಸಿದ್ಧರಾಮಯ್ಯನವರ ವಿರುದ್ಧ ಮಾತನಾಡುತ್ತಿದ್ದಾರೆ; ಡಿಕೆಶಿ ವ್ಯಂಗ್ಯ

dk shivakumar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(25/10/2020): ‘ಬಿಜೆಪಿ ನಾಯಕರಿಗೆ ಪ್ರಚಾರಬೇಕು. ಅದಕ್ಕಾಗಿ ನನ್ನ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಛೇಡಿಸಿದ್ದಾರೆ.

ಕೆಪಿಸಿಸಿ ಕಛೇರಿಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, `ನಮ್ಮ ಬಗ್ಗೆ ಮಾತನಾಡಿದರೆ ಮಾಧ್ಯಮಗಳು ಅವರಿಗೆ ಚೆನ್ನಾಗಿ ಪ್ರಚಾರ ಕೊಡುತ್ತವೆ. ಇಲ್ಲವಾದರೆ ಅವರನ್ನು ತೋರಿಸುವುದಿಲ್ಲ. ಹೀಗಾಗಿ ಅವರು ನನ್ನ ಹಾಗೂ ಸಿದ್ದರಾಮಯ್ಯನವರ ಹೆಸರನ್ನು ಎಲ್ಲೆಲ್ಲಿ ಬಳಸಿಕೊಳ್ಳಬೇಕೋ ಅಲ್ಲಿ ಯಥೇಚ್ಛವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದರು.

‘ಚುನಾವಣೆಯಲ್ಲಿ ನಾನು ಜಾತಿ ಕಾರ್ಡ್ ಬಳಸುತ್ತಿದ್ದೇನೆ ಎಂದು ಆರೋಪ ಮಾಡುತ್ತಿರುವ ಬಿಜೆಪಿ, ಬಿಜೆಪಿ ನನ್ನ ಮೇಲೆ ವಾಗ್ಪ್ರಹಾರ ನಡೆಸಲು ಮಂತ್ರಿ ಮಂಡಲದಲ್ಲಿರುವ ಒಕ್ಕಲಿಗ ಮುಖಂಡರನ್ನೇ ಛೂಬಿಟ್ಟಿದೆ’ ಎಂದು ಆರೋಪಿಸಿದರು.

ಕೆಲವರು ಕಾಂಗ್ರೆಸ್ಸಿಗೆ ಬೀಳುವ ಅಲ್ಪಸಂಖ್ಯಾತರ ಮತಗಳನ್ನು ತಪ್ಪಿಸಲು ಮತದಾರರ ಗುರುತಿನ ಚೀಟಿ ಕಸಿದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಯಾರು ಹೆದರಿಸುತ್ತಿದ್ದಾರೆ ಎಂಬುದರ ಬಗ್ಗೆ ಮತದಾರರೇ ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು