ಅಕ್ರಮ ಹಣ ವರ್ಗಾವಣೆ ಆರೋಪ; ಡಿಕೆಶಿಗೆ ಎದುರಾಯಿತು ಮತ್ತೊಂದು ಕಂಟಕ

dk shivakumar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(09/10/2020):  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ದೆಹಲಿ ಹೈಕೋರ್ಟ್ ಇಂದು  ಅವರ ಕೆಲವು ಸಂಬಂಧಿಕರು ಮತ್ತು ಆಪ್ತರನ್ನು ವಿಚಾರಣೆಗೆ ಒಳಪಡಿಸುವಂತೆ ಜಾರಿ ನಿರ್ದೇಶನಾಲಯಗೆ (ಇ.ಡಿ) ಸೂಚಿಸಿದೆ.

ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಡಿ.ಕೆ. ಶಿವಕುಮಾರ್‌ ಅವರ ಕೆಲವು ಸಂಬಂಧಿಕರು ಮತ್ತು ಆಪ್ತರಿಗೆ ಸಾಕ್ಷಿಗಳಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್  ನೀಡಿತ್ತು. ಇದನ್ನು ಪ್ರಶ್ನಿಸಿ ಶಿವಕುಮಾರ್‌ ಅವರ ಏಳು ಸಂಬಂಧಿಕರು ಮತ್ತು ಆಪ್ತರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು