ಡಾ. ಬಶೀರ್ ಕಂಬಳಬೆಟ್ಟುಗೆ ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

kannada rajyothsava
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾಸನ(02-11-2020): ಹಾಸನ ಜಿಲ್ಲಾಡಳಿತ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಸಲುವಾಗಿ ಸಮಾಜ ಸೇವೆ ಹಾಗೂ ಕೊರೋನ ಖಾಯಿಲೆ ಸಂದರ್ಭ ಮಾಡಿದ ವೈದ್ಯಕೀಯ ಸೇವೆಯನ್ನು ಗುರುತಿಸಿ ಡಾ. ಅಬ್ದುಲ್ ಬಶೀರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.

ಈ ಪ್ರಶಸ್ತಿಯನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಗೋಪಾಲಯ್ಯ ನವರು ವಿತರಿಸಿದರು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ನಿವಾಸಿ ಯಾಗಿರುವ ಇವರು ಎಂಬಿಬಿಎಸ್, ಎಂಎಸ್ ಪದವಿ ಮುಗಿಸಿ, ಹಾಸನದಲ್ಲಿ ಕಳೆದ 20 ವರ್ಷದಿಂದ ಕೀಲು ಮೂಳೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದು ಎಲ್ಲಾ ಸೌಲಭ್ಯವುಳ್ಳ ಇವರದೇ ಆದ ಜನಪ್ರಿಯ ಆಸ್ಪತ್ರೆಯನ್ನು ನಡೆಸುತ್ತಿದ್ದಾರೆ, ಅನೇಕ ಜನಪರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಾರೆ.

ಕಳೆದ ವರ್ಷ ಹಾಸನ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವೈದ್ಯ ಶ್ರೇಷ್ಠ ಪ್ರಶಸ್ತಿ, ಅದು ಅಲ್ಲದೇ ಅನೇಕ ಸಂಘ ಸಂಸ್ಥೆಗಳಿಂದ ಗೌರವ, ಸನ್ಮಾನವನ್ನು ಪಡೆದಿರುತ್ತಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು