ಡ್ರಗ್ಸ್ ಕೇಸ್| ರಾಗಿಣಿ, ಸಂಜನಾಗೆ ಜೈಲೇ ಗತಿ!

sanjana
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(03-11- 2020): ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ರಾಗಿಣಿ ದ್ವಿವೇದಿ, ಸಂಜನಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಆರೋಪಿಗಳಾದ ಸಂಜನಾ, ರಾಗಿಣಿ ದ್ವಿವೇದಿ, ರಾಹುಲ್, ವೀರೇನ್ ಖನ್ನಾ, ಪ್ರಶಾಂತ್, ಅಭಿಸ್ವಾಮಿ ಅವರುಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಜಾಮೀನು ನೀಡಬೇಕೆಂದು ಪ್ರಕರಣದ 6 ಆರೋಪಿಗಳು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಹೈಕೋರ್ಟ್‍ ನ್ಯಾಯಮೂರ್ತಿ ಹರೀಶ್‍ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಬಾರದೆಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ಪ್ರಕರಣದ ಇನ್ನು ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಸಹ ವಿಚಾರಣೆಗೊಳಪಡಿಸಬೇಕಾಗಿದೆ.

ವಿಚಾರಣಾ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು