ಹಿಂದೂ ಸಂಘಟನೆಗಳ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಡಿವೈಎಸ್ಪಿ ಮಾಡಿದ  ಕಾರ್ಯ ನಿಜಕ್ಕೂ ಶ್ಲಾಘನೀಯ! ಲಾಠಿ ಪರಿಹಾರವಲ್ಲ ಎಂದು ಸಾಭೀತು ಪಡಿಸಿದ ಲೇಡಿ ಸಿಂಗಂ ಮಾಡಿದ್ದೇನು ಗೊತ್ತಾ?

dysp
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಾಮರಾಜನಗರ(23-11-2020): ಮತಾಂತರವನ್ನು ವಿರೋಧಿಸಿ ಮತಾಂತರ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಪ್ರತಿಭಟನೆ ನಗರದಲ್ಲಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಡಿವೈಎಸ್ಪಿ ಪ್ರಿಯದರ್ಶನಿ ಸಾಣೆಕೊಪ್ಪ ರಾಷ್ಟ್ರಗೀತೆ ಹಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ನಿಜಕ್ಕೂ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹಿಂದೂಪರ ಸಂಘಟನೆಗಳ 500ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವದ, ನೂಕಾಟ, ತಳ್ಳಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಅರಿತ ಡಿವೈಎಸ್ಪಿ ಪ್ರಿಯದರ್ಶನಿ ತಮ್ಮ ಕಾರಿನಲ್ಲಿದ್ದ ಮೈಕ್ ನ್ನು ಹಿಡಿದು ರಾಷ್ಟ್ರಗೀತೆ ಹಾಡಿದ್ದಾರೆ. ಆಗ ಪ್ರತಿಭಟನಾಕಾರರು ತಹಬದಿಗೆ ಬಂದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಪೊಲೀಸರು ಪ್ರತಿಭಟನೆ ಮಾಡುವಾಗ ಲಾಟಿ, ದೊಣ್ಣೆಯಲ್ಲಿ ಹೊಡೆದು ಜನರನ್ನು ಮತ್ತಷ್ಟು ಕೆರಳಿಸುವುದನ್ನು ನಾವು ಈ ಮೊದಲು ಕಂಡಿದ್ದೇವೆ. ಆದರೆ ಡಿವೈಎಸ್ಪಿ ಪ್ರಿಯದರ್ಶಿನಿ ಉದ್ರೇಕಿತರನ್ನು ನಿಯಂತ್ರಿಸಲು ಮಾಡಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು