ಬೆಂಗಳೂರು: `ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ದೃಢ ಪ್ರಮಾಣ ಹೆಚ್ಚಿರುವುದರಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ(ಜ.21) ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಶಾಸಕರ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಕೋವಿಡ್ ಸೋಂಕು ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಸೋಂಕು ಹರಡಬಹುದೆಂಬ ಕಾರಣಕ್ಕೆ ಸರಕಾರ ಶಾಲೆ ಮುಚ್ಚುವ ತೀರ್ಮಾನ ಮಾಡಿತ್ತು. ಇದೀಗ ಶಾಲೆಗಳನ್ನು ಪುನರಾರಂಭಿಸುವ ಸಿಎಂ ಸಭೆ ನಡೆಸಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು’ ಎಂದರು.
