ಬೆಂಗಳೂರು(13-10-2020): ರಾಜ್ಯ ವಿಧಾನಪರಿಷತ್ನ 4 ಸ್ಥಾನಗಳಿಗೆ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ವಿಧಾನಪರಿಷತ್ನ 2 ಪದವೀಧರರ ಕ್ಷೇತ್ರಗಳು ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಅ. 28 ರಂದು ಚುನಾವಣೆ ನಡೆಯಲಿದೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 18 ನಾಮಪತ್ರಗಳು ಸ್ವೀಕರಣೆಯಾಗಿದ್ದು, ಮೂವರು ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಾಸ್ಸು ಪಡೆಯಲು ಇಂದು ಕೊನೆಯ ದಿನವಾಗಿದೆ.