ಬೆಂಗಳೂರು(13/10/2020): ಇಲ್ಲಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಶಿರಾ ವಿಧಾನಸಭೆ ಕ್ಷೇತ್ರದ ಟಿಕೆಟ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ರಾಜೇಶ್ ಗೌಡ ಅವರಿಗೆ ಸಿಕ್ಕಿದೆ. ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭೆ ಕ್ಷೇತ್ರ ತೆರವಾಗಿತ್ತು.
ಮಾಜಿ ಶಾಸಕ ಮುನಿರತ್ನ ಅವರಿಗೆ ರಾಜರಾಜೇಶ್ವರಿ ನಗರದಿಂದ ಟಿಕೆಟ್ ನೀಡಲಾಗಿದೆ. ಅವರ ರಾಜೀನಾಮೆಯಿಂದ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ನವೆಂಬರ್ 3ರಂದು ಮತದಾನ ನಡೆಯಲಿದೆ. ನವಂಬರ್ 10ರಂದು ಮತ ಎಣಿಕೆಯಾಗಲಿದೆ.