ಮತದಾನದಂದು ರಜೆ ನೀಡಿ ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ; ಚು.ಆಯೋಗ ಎಚ್ಚರಿಕೆ

election
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(15/10/2020): ನವೆಂಬರ್ 3 ರಂದು ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು. ಇಲ್ಲದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಎದುರಿಸಿ ಎಂದು ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ  ಉಪ ಚುನಾವಣೆ ನಡೆಯಲಿದ್ದು, ಅಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಲ್ಲ ಅರ್ಹ ಎಲ್ಲ ಕಾರ್ಮಿಕ ಮತದಾರರಿಗೆ ವೇತನ ಸಹಿತ ರಜೆಯನ್ನು ಚುನಾವಣಾ ಆಯೋಗ ಘೋಷಿಸಿದೆ.

ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಆಯೋಗ ಘೋಷಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು