ಬೆಂಗಳೂರು (30-11-2020): ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆ ಡಿ.22ರಂದು ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ಘೋಷಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದೆ.
ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ರಾಜ್ಯದಲ್ಲಿ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆಗೆ ಬ್ರೇಕ್ ಬೀಳಲಿದೆ.