ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಸ್ಥಾಪನೆ: ಶಾಫಿ ಸಅದಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ತುಮಕೂರು: ನಗರದಲ್ಲಿ 14 ಎಕರೆ ವಕ್ಫ್ ಆಸ್ತಿ ಖಾಲಿ ಇದೆ, ಅದರಲ್ಲಿ ಬೃಹತ್ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ, ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದಾರೆ. ಜಿಲ್ಲಾ ಮುಸ್ಲಿಂ ಜಮಾಆತ್ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.  ಮುಸ್ಲಿಂ ಸಮುದಾಯದ ಯಾವುದೇ ಪ್ರತಿಭಾನ್ವಿತ ಮಗು, ಶುಲ್ಕದ ವಿಚಾರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತವಾಗಬಾರದು. ಸಮುದಾಯದ ಸಮಗ್ರ ಅಭಿವೃದ್ದಿಯ ಕನಸು ಹೊತ್ತಿರುವ ರಾಜ್ಯ ವಕ್ಫ್ ಬೋರ್ಡ್, ಪ್ರಮುಖವಾಗಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.

ವಕ್ಫ್ ಬೋರ್ಡ್‌ನಿಂದ ಬೆಂಗಳೂರಲ್ಲಿ ಅತ್ಯಾಧುನಿಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಿ ತರಬೇತಿ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ₹10 ಕೋಟಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮುಸ್ಲಿಂ ಜಮಾಅತ್ ವತಿಯಿಂದ ಶಾಫಿ ಸಅದಿಯವರಿಗೆ ಸನ್ಮಾನ ಮಾಡಲಾಯಿತು. ಜಿಲ್ಲಾ ಮುಸ್ಲಿಂ ಜಮಾಅತ್ ನಾಯಕರು ಹಾಗೂ ಸ್ಥಳೀಯ ಸುನ್ನೀ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು