ಕರ್ನಾಟಕದಲ್ಲಿ ತಾಲೂಕು ಪಂಚಾಯಿತಿ ರದ್ದು? ಸಚಿವರು ನೀಡಿದ ಸ್ಪಷ್ಟನೆಯೇನು?

eswarappa
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಪ್ಪಳ(02-03-2021): ಕರ್ನಾಟಕದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆ ರದ್ದತಿ ಕುರಿತು ಚರ್ಚೆ ಬೆನ್ನಲ್ಲೇ ತಾಲೂಕು ಪಂಚಾಯತಿ ರದ್ದು ಮಾಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ತಾಲೂಕು ಪಂಚಾಯಿತಿ ರದ್ದತಿ ಇಲ್ಲ. ತಾಲೂಕು ಪಂಚಾಯತ್ ಗೆ ಹೆಚ್ಚಿನ ಅಧಿಕಾರ, ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯಲ್ಲಿ ತಾಲೂಕು ಪಂಚಾಯಿತಿಗೆ ಹೆಚ್ಚು ಮಹತ್ವ ಇದೆ. ಅದನ್ನು ಮತ್ತಷ್ಟು ಶಕ್ತಿಗೊಳಿಸಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ.

ಈ ಮೊದಲು ಕರ್ನಾಟಕ ವಿಧಾನಸಭೆಯಲ್ಲಿ ಕೂಡ ಪಂಚಾಯಿತಿ ವ್ಯವಸ್ಥೆ ರದ್ದತಿ ಬಗ್ಗೆ ಚರ್ಚೆ ನಡೆದಿತ್ತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು