ಬೆಂಗಳೂರು(31-10-2020): ಆಸ್ಪತ್ರೆಯಿಂದ ಪರಾರಿಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.
ಸಂಪತ್ ರಾಜ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಹೊರ ರಾಜ್ಯಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸಂಪತ್ ರಾಜ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಕುಟುಂಬದವರನ್ನು ಕೂಡ ಪೊಲೀಸರಿಗೆ ಸಂಪರ್ಕಕ್ಕೆ ಸಿಕ್ಕಿಲ್ಲ.
ಬೆಂಗಳೂರು ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಸಂಪತ್ ರಾಜ್ ತನಿಖೆಗೆ ಹಾಜರಾಗಬೇಕಿತ್ತು.ಆದರೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗುರುವಾರ ರಾತ್ರಿ ಸಿಸಿಬಿ ಪೊಲೀಸರು ಆಸ್ಪತ್ರೆಗೆ ತೆರಳಿದಾಗ ಸಂಪತ್ ರಾಜ್ ಡಿಸ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎನ್ನುವುದು ತಿಳಿದು ಬಂದಿತ್ತು.