ಬಾಗಲಕೋಟೆ(30-10-2020): ಪೊಲೀಸರು ಬಿಜೆಪಿಯ ಚೇಲಾಗಳಾಗಿದ್ದಾರೆ, ಪೊಲೀಸರಂತೂ ನಾಯಿಗಿಂತ ಕಡೆಯಾಗಿದ್ದಾರೆ ಎಂದು ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ ನೀಡಿದ್ದಾರೆ.
ಹುನಗುಂದ ತಾಲೂಕಿನ ಪಿಕೆಪಿಎಸ್ ಚುನಾವಣೆಯಲ್ಲಿ ಬಿಜೆಪಿ ಸೋಲುವ ಭೀತಿಯಿಂದ ಅಧಿಕಾರಿಗಳು ಹಾಗೂ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದ ಕಾಶಪ್ಪನವರ್, ನನಗೆ ಜೀವ ಭಯವಿದೆ. ಏನಾದರೂ ಆದರೆ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್ ಅವರೇ ಕಾರಣ ಎಂದು ಹೇಳಿದ್ದಾರೆ.
ಬಿಜೆಪಿಯವರು ಪೊಲೀಸ್ ಹಾಗೂ ಅಧಿಕಾರಿಗಳ ಮೂಲಕ ನಮ್ಮ ಮತ್ತು ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಪೊಲೀಸರು ಬೆದರಿಕೆ ಹಾಕಿದ್ದಾರೆಂದು ಕಾಶಪ್ಪನವರ್ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಮತ್ತು ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ. ನಾನು ಮತ್ತೆ ಚುನಾವಣೆಯಲ್ಲಿ ಗೆಲ್ಲುತ್ತೇನೆಂದು ಬಿಜೆಪಿ ಇಂತಹ ಕೆಲಸವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.