ದೆಹಲಿ(13-12-2020): ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಜಾರಿಗೆ ತಂದ ಮೂರು ಬಿಲ್ ಗಳನ್ನು ಬಲವಾಗಿ ಸಮರ್ಥಿಸಿದ್ದು, ಬಿಲ್ ಹೂಡಿಕೆ ಮತ್ತು ತಂತ್ರಜ್ಞಾನವನ್ನು ಆಕರ್ಷಿಸುತ್ತದೆ, ಪರ್ಯಾಯ ಮಾರುಕಟ್ಟೆಗಳನ್ನು ತೆರೆಯುತ್ತದೆ ಮತ್ತು ಕೃಷಿ ಆದಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್ಐಸಿಸಿಐ)ಯ ವಾರ್ಷಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿ, ಸೆಪ್ಟೆಂಬರ್ನಲ್ಲಿ ಜಾರಿಗೆ ತರಲಾದ ಕೃಷಿ ಕ್ಷೇತ್ರದ ಸುಧಾರಣೆಗಳು ಕೃಷಿಗೆ ಅಡ್ಡಿಯುಂಟುಮಾಡುವ ತಡೆಗಳನ್ನು ತೆಗೆದುಹಾಕುವ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆ. ಸುಧಾರಣೆಗಳು ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮತ್ತು ರೈತರಿಗೆ ಅನುಕೂಲವಾಗಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಸರ್ಕಾರದ ಎಲ್ಲಾ ಸುಧಾರಣೆಗಳ ಗುರಿ ರೈತರನ್ನು ಸಮೃದ್ಧಿಯನ್ನಾಗಿ ಮಾಡುವುದು. ಹಿಂದಿನ ಸಂಸತ್ತಿನ ಅಧಿವೇಶನದಲ್ಲಿ ಅಂಗೀಕರಿಸಲ್ಪಟ್ಟ ಹೊಸ ಶಾಸನವು ರೈತರಿಗೆ ತಮ್ಮ ಬೆಳೆಗಳನ್ನು ಖರೀದಿಸಲು ಅಥವಾ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಇತ್ತೀಚಿನ ಕಾನೂನುಗಳು ಮಂಡಿ ವ್ಯವಸ್ಥೆಯ ಹೊರಗೆ ಮುಕ್ತವಾಗಿ ವ್ಯಾಪಾರ ಮಾಡಲು ರೈತರಿಗೆ ಅವಕಾಶ ಮಾಡಿಕೊಡುತ್ತವೆ. ಖಾಸಗಿ ವ್ಯಾಪಾರಿಗಳಿಗೆ ಭವಿಷ್ಯದ ಮಾರಾಟಕ್ಕಾಗಿ ಹೆಚ್ಚಿನ ಪ್ರಮಾಣದ ಅಗತ್ಯ ಸರಕುಗಳನ್ನು ಸಂಗ್ರಹಿಸಲು ಮತ್ತು ಗುತ್ತಿಗೆ ಕೃಷಿಗೆ ಹೊಸ ನಿಯಮಗಳನ್ನು ರೂಪಿಸಲು ಅನುಮತಿ ನೀಡುತ್ತವೆ. ಹೊಸ ಕಾನೂನುಗಳು ರೈತರನ್ನು ಶ್ರೀಮಂತರನ್ನಾಗಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.