‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ: ಮಹಿಳೆಯರು ಸೇರಿ ಐವರ ಬಂಧನ

police
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(24-01-2021): ಖಾನ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಬಳಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ್ದಾರೆಂದು ಐವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಭಾನುವಾರ ಮುಂಜಾನೆ 1 ಗಂಟೆ ಸುಮಾರಿಗೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳು ಮೆಟ್ರೋ ನಿಲ್ದಾಣದ ಬಳಿ ಜನರಿಗೆ ಕೇಳಿಸಿವೆ, ಆ ನಂತರ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು