62 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ನಾಪತ್ತೆ! ಅವಘಡ ಸಂಭವಿಸಿರುವ ಶಂಕೆ

flight
Share on facebook
Share on twitter
Share on linkedin
Share on whatsapp
Share on telegram
Share on email
Share on print

ಇಂಡೋನೇಷ್ಯಾ(08-01-2021): ಇಂಡೋನೇಷ್ಯಾದಲ್ಲಿ ದೇಶಿಯ ವಿಮಾನವೊಂದು ಟೇಕ್ ಆಫ್ ಆದ ಕೆಲ ಹೊತ್ತಿನಲ್ಲೇ ನಾಪತ್ತೆಯಾಗಿದ್ದು, ಭಾರೀ ಅನಾಹುತ ಸಂಭವಿಸಿರುವ ಸಂಶಯ ವ್ಯಕ್ತವಾಗಿದೆ.

ಬೋಯಿಂಗ್ 737-500 ವಿಮಾನವು ಜಕಾರ್ತಾದಿಂದ ಮಧ್ಯಾಹ್ನ1:56 ಕ್ಕೆ ಟೇಕ್ ಆಫ್ ಆಗಿದ್ದು ಮಧ್ಯಾಹ್ನ 2:40 ಕ್ಕೆ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ವರದಿಯಾಗಿದೆ.

ವಿಮಾನದಲ್ಲಿ ಸುಮಾರು 62 ಪ್ರಯಾಣಿಕರಿದ್ದರು. ವಿಮಾನ ಸುಮಾರು 10,000 ಅಡಿ ಮೇಲೆ ಹಾರುತ್ತಿದ್ದಾಗ ಇದ್ದಕ್ಕಿದ್ದ ಹಾಗೆ ರಡಾರ್‌ನೊಂದಿಗೆ ಸಂಪರ್ಕ ಕಡಿದುಕೊಂಡಿತ್ತು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು