ನವದೆಹಲಿ(29-09-2020): ನೂತನ ಕೃಷಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕೇರಳದ ತ್ರಿಶೂರ್ ಸಂಸದ ಟಿ.ಎನ್. ಪ್ರತಾಪನ್, ಕೃಷಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ನೂತನ ಕಾಯ್ದೆ 2020ರ ರೈತರ ಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು), 15 (ತಾರತಮ್ಯ ನಿಷೇಧ) ಮತ್ತು 21 (ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರಪತಿಗಳು ಸಹಿ ಹಾಕಿರುವ ಕಾಯ್ದೆಯು ಅಸಂವಿಧಾನಿಕ, ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಗಮನಕ್ಕೆ ಸಂಸದ ಟಿ.ಎನ್. ಪ್ರತಾಪನ್ ತಂದಿದ್ದಾರೆ.