ತಮಿಳುನಾಡು(19-12-2020): ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗಾಂಧಿವಾದಿ ಚಳುವಳಿಯ ನಾಯಕ, ಗಾಂಧಿ ಮಕ್ಕಲ್ ಇಯಕ್ಕಂ ಜಿಲ್ಲಾಧ್ಯಕ್ಷನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಮತ್ತು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೆರಿಯಾಸಾಮಿ (47) ಎಂಬ ಆರೋಪಿ 12 ವರ್ಷದ ಬಾಲಕಿಯನ್ನು ತನ್ನ ಫೋಟೋ-ಕಾಪಿ ಅಂಗಡಿಗೆ ಕರೆದೊಯ್ದು, ತನ್ನ ಲ್ಯಾಪ್ಟಾಪ್ನಲ್ಲಿ ಅಶ್ಲೀಲ ಚಿತ್ರಗಳನ್ನು ತೋರಿಸಿದ್ದಾನೆ. ಮತ್ತು ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿ ಅಂಗಡಿಯಿಂದ ಓಡಿಹೋಗಿ ತನ್ನ ಹೆತ್ತವರಿಗೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಆಕೆಯ ಪೋಷಕರು ಚೈಲ್ಡ್ ಲೈನ್ಗೆ ದೂರು ನೀಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೇಸ್ ಬಗ್ಗೆ ತಿಳಿಯುತ್ತಿದ್ದಂತೆ ಪರಾರಿಯಾಗಿದ್ದ ಪೆರಿಯಸಾಮಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು, ಈ ಮಧ್ಯೆ ಆರೋಪಿ ಪೆರಿಯಾಸ್ವಾಮಿ ಪೊಲೀಸರ ಮುಂದೆ ಶರಣಾಗಿದ್ದಾನೆ.