ಜೈಪುರ (02-10-2020): ಕೆಲವು ಅಪರಿಚಿತ ಜನರು ಶುಕ್ರವಾರ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೆಯ ಮುಂದೆ ಕಸದ ರಾಶಿಯನ್ನು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರೈಸಿಂಗ್ ಬೆನಿವಾಲ್ ತಿಳಿಸಿದ್ದಾರೆ.
ವೈಶಾಲಿ ನಗರ ಪ್ರದೇಶದ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಅವರ ಮನೆಯಲ್ಲಿ ಈ ವೇಳೆ ಯಾರು ಹಾಜರಿದ್ದರು ಎಂಬುದು ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ನ ಹಳ್ಳಿಯೊಂದರಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಯುವತಿಯ ಸಾವಿಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಈ ಘಟನೆ ನಡೆದಿದೆ.