ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯಿಂದ ಆತ್ಮಹತ್ಯೆಗೆ ಯತ್ನ| ಕೇಸ್ ಹಿಂಪಡೆಯುವಂತೆ ಸ್ಥಳೀಯ ಬಿಜೆಪಿ ಶಾಸಕನಿಂದ ಒತ್ತಡ!

harrasment
Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಲಿಗರ್ (29-11-2020): ಯುಪಿಯ ಅಲಿಗರ್ ಜಿಲ್ಲೆಯ ಮೂವರು ಯುವಕರಿಂದ ಲೈಂಗಿಕ ಕಿರುಕುಳಕ್ಕೊಳಗಾದ ನಂತರ ವಿಷ ಸೇವಿಸಿದ 17 ವರ್ಷದ ಬಾಲಕಿ ನೋಯ್ಡಾ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾಳೆ.

ನವೆಂಬರ್ 6 ರಂದು ಅಲಿಗರ್ ಪಿಸ್ವಾ ಪೊಲೀಸ್ ಠಾಣೆಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಮೂವರು ಆರೋಪಿಗಳ ವಿರುದ್ಧ ಸಂತ್ರಸ್ತೆಯ ಕುಟುಂಬ ಲೈಂಗಿಕ ಕಿರುಕುಳದ ದೂರು ದಾಖಲಿಸಿತ್ತು.

ಕಳೆದ ಮೂರು ವಾರಗಳಿಂದ ಆರೋಪಿಗಳಿಂದ  ಬಂದ ಬೆದರಿಕೆಗಳನ್ನು ಪರಿಶೀಲಿಸುವಂತೆ ಅವರು ಪಿಸ್ವಾ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ ತಮ್ಮ ಸಮಸ್ಯೆಗಳನ್ನು ಬಗೆಹರಿಸುವ ಬದಲು ಪೊಲೀಸರು ಈ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಸ್ಥಳೀಯ ಬಿಜೆಪಿ ಶಾಸಕರೊಬ್ಬರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು